ತಾಲ್ಲೂಕಿನ ಗುಂಜೂರು ಗ್ರಾಮದ ಹೊರವಲಯದಲ್ಲಿರುವ ಮುನಿಯಪ್ಪ ಎಂಬುವವರ ತೋಟದ ಮನೆಯಲ್ಲಿ ಸಾಕಿದ್ದ ಒಂದು ಎಮ್ಮೆ ಕರು, ಎರಡು ಹಸುವಿನ ಕರು ಹಾಗೂ ಒಂದು ಹಸು ಸೇರಿ ನಾಲ್ಕು ರಾಸು ಮೃತಪಟ್ಟಿವೆ.ಹಸುಗಳಿದ್ದ ಸ್ಥಳದ ನೀರಿನ ಮಾದರಿ ಸಂಗ್ರಹಿಸಲಾಗಿದೆ. ಘಟನೆ ಬಗ್ಗೆ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಡಾ.ಎನ್.ಜಗದೀಶ್ ಅವರಿಗೆ ಮಾಹಿತಿ ನೀಡಲಾಗಿದೆ. ಅಸ್ವಸ್ಥ ಹಸುಗಳಿಗೆ ಚಿಕಿತ್ಸೆ ನೀಡಲಾಗಿದೆ. ಪ್ರಯೋಗಾಲಯದ ವರದಿ ಬಂದ ನಂತರ ಹಸುಗಳ ಸಾವಿನ ನಿಖರ ಕಾರಣ ತಿಳಿಯಲಿದೆ. ಮೃತಪಟ್ಟಿರುವ ಹಸುಗಳಿಗೆ ಕಾಮಧೇನು ವಿಪತ್ತು ಯೋಜನೆಯಡಿ ಹಾಗೂ ರೈತಾಭಿವೃದ್ದಿ ಯೋಜನೆಯಡಿ ಪ್ರತಿ ಹಸುವಿಗೆ ₹10 ಸಾವಿರ ಪರಿಹಾರ ನೀಡಲಾಗುವುದು ಎಂದು ತಾಲ್ಲೂಕು ಮುಖ್ಯ ಪಶು ವೈದ್ಯಾಕಾರಿ ಡಾ.ವಿಶ್ವನಾಥ್ ತಿಳಿಸಿದ್ದಾರೆ.ಮುನಿಯಪ್ಪ ಅವರ ತೋಟದ ಮನೆಯಲ್ಲಿ ಸುಮಾರು 10 ಹಸುಗಳನ್ನು ಸಾಕಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

