Breaking News

ಬೆಂಗಳೂರು : ಆನಂದ್ ಗುರೂಜಿಗೆ ಬ್ಲ್ಯಾಕ್ ಮೇಲ್, ಜೀವಬೆದರಿಕೆ, ಇಬ್ಬರ ವಿರುದ್ಧ FIR ದಾಖಲು!

ಆನಂದ್ ಗುರೂಜಿ ಅವರಿಗೆ ಹಣಕ್ಕೆ ಬೇಡಿಕೆ ಇಟ್ಟು ಜೀವಬೆದರಿಕೆ ಹಾಗೂ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಆನಂದ್ ಗುರೂಜಿ ದೂರು ದಾಖಲಿಸಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಕೃಷ್ಣಮೂರ್ತಿ ಹಾಗೂ ದಿವ್ಯಾ ವಸಂತ್ ಎಂಬುವವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.ಆನ್ಂದ್ ಗುರೂಜಿ ವಿಡಿಯೋ ಹಾಗೂ ಜಮೀನು ಖರೀದಿ ಸಂಬಂಧ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ಆದಾರೂ ಈ ಪ್ರಕರಣದ ವಿಚಾರವಾಗಿ ಇಬ್ಬರೂ ಬ್ಲ್ಯಾಕ್ ಮೇಲ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಲಾಗಿದೆ.ಆನಂದ್ ಗುರೂಜಿ ಅವರ ಕಾರು ಅಡ್ಡಗಟ್ಟಿ ಅವಾಚ್ಯ ಪದಗಳಿಂದ ನಿಂದಿಸಿ, ಜೀವಬೆದರಿಕೆ ಹಾಕಿದ್ದಾರಂತೆ. ಈ ಬಗ್ಗೆ ಆನಂದ್ ಗುರೂಜಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *