Breaking News

ಬೆಂಗಳೂರು :ಆಪರೇಷನ್‌ ಸಿಂಧೂರ ವಿಜಯೋತ್ಸವದಲ್ಲಿ ಪಾಕ್‌ ಪರ ಘೋಷಣೆ: ಟೆಕ್ಕಿ ಅರೆಸ್ಟ್!

ಪಾಕಿಸ್ತಾನ ಪರ ಘೋಷಣೆ ಕೂಗಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಪ್ರದೇಶದ ಪ್ರಶಾಂತ್ ಲೇಔಟ್‌ನ ಪಿಜಿಯಲ್ಲಿ ನಡೆದಿದೆ. ಛತ್ತೀಸ್‌ಗಢ ಮೂಲದ 26 ವರ್ಷದ ಶುಭಾಂಶು ಶುಕ್ಲಾ ಬಂಧಿತ ಆರೋಪಿಯಾಗಿದ್ದು,ಪೊಲೀಸರು ಸ್ಥಳಕ್ಕೆ ಆಗಮಿಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಶುಭಾಂಶು ಪಾಕ್ ಪರ ಘೋಷಣೆ ಕೂಗಿದ್ದು ವಿಚಾರಣೆ ವೇಳೆ ದೃಢಪಟ್ಟಿದ್ದು, ವೈಟ್‌ಫೀಲ್ಡ್ ಠಾಣೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆತನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ಸದ್ಯ ತನಿಖೆ ಮುಂದುವರಿದಿದೆ.ಆಪರೇಷನ್ ಸಿಂಧೂರ್’ ಯಶಸ್ಸನ್ನು ಸಂಭ್ರಮಿಸುತ್ತಿದ್ದ ವೇಳೆ ಬಾಲ್ಕನಿಯಲ್ಲಿ ನಿಂತು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿದ್ದಾನೆ ಎಂದು ತಿಳಿದುಬಂದಿದೆ. ಅಲ್ಲಿದ್ದ ಯುವಕರು ತುರ್ತು ಸಹಾಯವಾಣಿ ಸಂಖ್ಯೆಗೆ 112 ಗೆ ಕರೆಮಾಡಿ ಮಾಹಿತಿ ನೀಡಿದ್ದಾರೆ.‌

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *