Breaking News

ಬಂಟ್ವಳ :ಉರುಳಿಬಿದ್ದ ಲಾರಿಗಳು; ಬಿಸಿ ಡಾಂಬರು ಮೈಮೇಲೆ ಬಿದ್ದು ಓರ್ವ ಚಾಲಕ ಮೃತ್ಯು; ಕ್ಲೀನರ್ ಗೆ ಗಂಭೀರ ಗಾಯ!!

ಎರಡು ಲಾರಿಗಳ ಮಧ್ಯೆ ಅಪಘಾತ ಸಂಭವಿಸಿದ ವೇಳೆ ಒಂದು ಲಾರಿಯಲ್ಲಿದ್ದ ಬಿಸಿ ಡಾಂಬರು ಮೈಮೇಲೆ ಬಿದ್ದು ಲಾರಿ ಚಾಲಕರೊಬ್ಬರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಗುರುವಾರ ಸಜೀಪದಲ್ಲಿ ನಡೆದಿದೆ.ಬಿಸಿ ಡಾಂಬರು ತುಂಬಿದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಎರಡು ಲಾರಿಗಳು ಆಳೆತ್ತರದಲ್ಲಿದ್ದ ಅಡಿಕೆ ತೋಟಕ್ಕೆ ಉರುಳಿಬಿದ್ದಿವೆ. ಈ ವೇಳೆ ಟಿಪ್ಪರ್ ನಲ್ಲಿದ್ದ ಬಿಸಿ ಡಾಂಬರು ಕೆಂಪು ಕಲ್ಲು ಸಾಗಾಟದ ಲಾರಿ ಚಾಲಕ ರಫೀಕ್ ಅವರ ಮೈ ಮೇಲೆ ಬಿದ್ದಿದೆ. ಇದರಿಂದ ಭಾಗಶಃ ಬೆಂದು ಹೋಗಿದ್ದ ರಫೀಕ್ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.ಸಜೀಪ ನಡುವಿನಲ್ಲಿ ರಸ್ತೆ ಕಾಮಗಾರಿಗಾಗಿ ಡಾಂಬರು ಮಿಶ್ರಿತ ಜಲ್ಲಿಕಲ್ಲು ಸಾಗಿಸಲಾಗುತ್ತಿತ್ತೆನ್ನಲಾಗಿದೆ.ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಸಂಚಾರ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಸಜೀಪ ನಡು ಗ್ರಾಪಂ ಸದಸ್ಯರೂ ಆಗಿರುವ ಸಜೀಪನಡು ಗೋಳಿಪಡ್ಪುನಿವಾಸಿ ರಫೀಕ್(45) ಮೃತಪಟ್ಟವರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *