ಬಾಂಬ್ ಸ್ಫೋಟಗೊಂಡ ಕೂಡಲೇ ಸಾರ್ವಜನಿಕರು ಓಡಲಾರಂಭಿಸಿದರು, ಗಾಯಾಳುಗಳು ಕೆಳಕ್ಕೆ ಬಿದ್ದು ನರಳಾಡುತ್ತಿದ್ದರು. ಬಾಂಬ್ ಸ್ಫೋಟದ ಶಬ್ದ ಕೇಳಿದ ತಕ್ಷಣ ತುರ್ತು ಸಂದರ್ಭದ ಸೈರನ್ ಮೊಳಗಿತು. ಕಂಟ್ರೋಲ್ ರೂಂಗೆ ಮಾಹಿತಿ ರವಾನಿಸಲಾಯಿತು.ಅಗ್ನಿಶಾಮಕ ದಳ, ಆರೋಗ್ಯ ಇಲಾಖೆ, ರೆಡ್‍ಕ್ರಾಸ್ ಸಂಸ್ಥೆಯ ತಂಡದ ಸದಸ್ಯರು ಗಾಯಾಳುಗಳ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ವೈದ್ಯಕೀಯ ತಂಡ ಸ್ಥಳದಲ್ಲಿಯೇ ತುರ್ತು ಚಿಕಿತ್ಸೆ ಆರಂಭಿಸಿತು.ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ರೆಡ್‍ಕ್ರಾಸ್ ಸಹಯೋಗದಲ್ಲಿ ತುರ್ತು ಸಂದರ್ಭದಲ್ಲಿ ಸಾರ್ವಜನಿಕರ ಸಂರಕ್ಷಣೆ ಮಾಡುವ ಕುರಿತ ‘ಅಪರೇಷನ್ ಅಭ್ಯಾಸ್’ದ ಪ್ರ್ಯಾತ್ಯಕ್ಷಿಕೆಯ ದೃಶ್ಯ ಇದು.
bigtvnews | Hubli Dharwad News | Kannada News | Karnataka News Hubli News | News In Hubli | Local news

