Breaking News

ಬೆಂಗಳೂರು :ಸಾಲದ ಹಣ ವಾಪಸ್ ಕೇಳಿದಕ್ಕೆ ಚಾಕು ಇರಿದಿದ್ದ ಆರೋಪಿ ಸೆರೆ!

ಸಾಲ ನೀಡಿದ್ದ ಹಣವನ್ನು ವಾಪಸ್ ನೀಡುವಂತೆ ಕೇಳಿದ್ದ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಹಣ ನೀಡುವಂತೆ ಆರೋಪಿಯನ್ನು ಕೇಳಿದ್ದು, ಈ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ. ಜಗಳ ವಿಕೋಪಕ್ಕೆ ತಿರುಗಿದ್ದಾಗ ಆರೋಪಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಆರೋಪಿ ವಿರುದ್ಧ ದೂರು ನೀಡಿದ್ದರು. ದೂರನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹನುಮಂತನಗರ ನಿವಾಸಿಯಾದ ಕ್ಯಾಚ್ ಚಾಲಕ ರಾಜು(೪೬) ಬಂಧಿತ. ಆರೋಪಿಯು ಏ.೧೨ ರಂದು ಮಹಿಳೆಯನ್ನು ಚಾಕುವಿನಿಂದ ಇರಿದು ಪರಾರಿಯಾಗಿದ್ದ.

Share News

About BigTv News

Check Also

ಬೆಂಗಳೂರಲ್ಲಿ ಅಂಗಡಿಯಲ್ಲೇ ಮಾಲೀಕನ ಬರ್ಬರ ಕೊಲೆ

ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಅಂಗಡಿ ಮಾಲೀಕ ರಾಜು ಸಿಂಗ್ ಅವರನ್ನು ಅಂಗಡಿಯೊಳಗೇ ಬರ್ಬರವಾಗಿ ಕೊಲೆ …

Leave a Reply

Your email address will not be published. Required fields are marked *