Breaking News

ತುಮಕೂರು :ನಕಲಿ ಬಿಲ್ ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚನೆ!

ಮೂರು ದಿನಗಳ ಹಿಂದೆ ಚೀನಾ ಪ್ರವಾಸಕ್ಕೆ ತೆರಳಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಡಿ.ರಾಜಶೇಖರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಕೋಟ್ಯಂತರ ರೂಪಾಯಿ ಆಸ್ತಿ ಸಂಪಾದಿಸಿರುವುದು ದಾಳಿ ಸಮಯದಲ್ಲಿ ಬೆಳಕಿಗೆ ಬಂದಿದೆ.ಹಳೆ ಕಾಮಗಾರಿ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಟಿಸಿ ₹2 ಕೋಟಿಗೂ ಅಧಿಕ ಮೊತ್ತ ಪಡೆದುಕೊಂಡಿರುವುದು, 2024-25ರಲ್ಲೂ ಹಳೆ ಕಾಮಗಾರಿಗಳಿಗೆ ನಕಲಿ ಬಿಲ್ ಸೃಷ್ಟಿಸಿ ₹3 ಕೋಟಿಗೂ ಅಧಿಕ ಮೊತ್ತ ಡ್ರಾ ಮಾಡಿಕೊಂಡಿದ್ದಾರೆ. ಸಂಬಂಧಿಕರ ಹೆಸರಿನಲ್ಲೂ ನಕಲಿ ಬಿಲ್ ಸೃಷ್ಟಿಸಿ ವಂಚಿಸಿರುವುದು ತಪಾಸಣೆ ಸಮಯದಲ್ಲಿ ಗೊತ್ತಾಗಿದೆ.ಇನ್ನಷ್ಟು ದಾಖಲೆಗಳನ್ನು ಪರಿಶೀಲಿಸಿದ ನಂತರ ಅಕ್ರಮಗಳ ಬಗ್ಗೆ ಸ್ಪಷ್ಟತೆ ಸಿಗಲಿದೆ. ಪೂರ್ಣ ಪ್ರಮಾಣದಲ್ಲಿ ತನಿಖೆ ನಡೆದ ಬಳಿಕವಷ್ಟೇ ಅಕ್ರಮಗಳ ಬಗ್ಗೆ ಮಾಹಿತಿ ಲಭ್ಯವಾಗಲಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.ರಾಜಶೇಖರ್ ವಿರುದ್ಧ ಸಾಕಷ್ಟು ದೂರು ಕೇಳಿ ಬಂದಿದ್ದವು. ಅಕ್ರಮಗಳ ಸಾಕಷ್ಟು ದೂರು ಬಂದಿದ್ದರೂ ಈವರೆಗೂ ಯಾರೊಬ್ಬರೂ ತನಿಖೆಗೆ ಮುಂದಾಗಿರಲಿಲ್ಲ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *