Breaking News

ಲಿಂಗಸುಗೂರು: ವಿಷ ಕುಡಿಸಿ ಕೊಲೆ, 10 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ!

ಹನಮಗುಡ್ಡ ಹೊಸೂರು ಗ್ರಾಮದಲ್ಲಿ ಹೊಲ ಸಾಗುವಳಿ ಮಾಡುವ ವಿಚಾರವಾಗಿ 2019ರ ಜನವರಿ 1ರಂದು ಅಮರೇಶ ಅವರಿಗೆ ಬಲವಂತವಾಗಿ ಕ್ರಿಮಿನಾಶಕ ಕುಡಿಸಿ ಆರೋಪಿಗಳು ಕೊಲೆ ಮಾಡಿದ್ದರು.ಕೊಲೆ ಮಾಡಿದ 10 ಅಪರಾಧಿಗಳಿಗೆ ಇಲ್ಲಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ಜೀವಾವಧಿ ಶಿಕ್ಷೆ ವಿಧಿಸಿದೆ.ಗೌಂಡಿ ವಿರುದ್ಧ ಮುದಗಲ್ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಸ್ಕಿ ಸಿಪಿಐ ಚನ್ನಯ್ಯ ಹಿರೇಮಠ ತನಿಖೆ ನಡೆಸಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ ₹37,500 ದಂಡ ವಿಧಿಸಿ ಶುಕ್ರವಾರ ಆದೇಶ ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಆರ್.ಎ ಗಡಕರಿ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *