ವೇಶ್ಯಾವಾಟಿಕೆ ಪ್ರಕರಣ ದಾಖಲಿಸದೇ ಇರಲು ₹1.20 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಕಾಡುಗೋಡಿ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್ ಚಿತ್ರಗಾರ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲಂಚ ಪಡೆಯುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ಯಲ್ಲಪ್ಪ ಠಾಣೆಯಿಂದ ಪರಾರಿಯಾಗಿದ್ದಾರೆ.ಸೀಗೇಹಳ್ಳಿ ನಿವಾಸಿ ಜಯರಾಂ ಎಂಬುವವರ ಬೈಕ್ ಅನ್ನು ವಶಕ್ಕೆ ಪಡೆದಿದ್ದರು ಎಂದು ಲೋಕಾಯುಕ್ತ ಪೊಲೀಸ್ ಮೂಲಗಳು ತಿಳಿಸಿವೆ.ಬೈಕ್ ಅನ್ನು ಬಿಡುಗಡೆ ಮಾಡಲು ಮತ್ತು ಜಯರಾಂ ವಿರುದ್ಧ ಪ್ರಕರಣ ದಾಖಲಿಸದೇ ಇರಲು ಪಿಎಸ್‌ಐ ಪ್ರವೀಣ್ ಅವರು ₹1.20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಜಯರಾಂ ಅವರು ಅದರಲ್ಲಿ ಈಗಾಗಲೇ ₹75,000 ನೀಡಿದ್ದರು. ಪಿಎಸ್‌ಐ ಇನ್ನಷ್ಟು ಹಣಕ್ಕೆ ಒತ್ತಡ ಹೇರಿದ ನಂತರ ಲೋಕಾಯುಕ್ತಕ್ಕೆ ದೂರು ನೀಡಿದ್ದರು.ಬಂಧಿತರಿಂದ ಲಂಚದ ಹಣ ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರೆಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

