Breaking News

ಆಪರೇಷನ್‌ ಸಿಂಧೂರದ ಬಗ್ಗೆ ಪಾಕ್‌ಗೆ ಮಾಹಿತಿ! ಯೂಟ್ಯೂಬರ್, ವಿದ್ಯಾರ್ಥಿ ಸೇರಿ 6 ಮಂದಿ ಅಂದರ್!

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್​ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಟ್ರಾವೆಲ್ ವಿಥ್ ಜೋ’ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ, 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಳು. ಆ ಭೇಟಿ ವೇಳೆ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್​ ಪರಿಚಯವಾಗಿದ್ದ. ಈಗ ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್​ನಲ್ಲಿ ಕೆಲಸ ಮಾಡುತ್ತಿದ್ದ. ಈತನೇ ಜ್ಯೋತಿಯನ್ನು ಪಾಕಿಸ್ತಾನ ಗುಪ್ತಚರ ಇಲಾಖೆಗೆ ಪರಿಚಯಿಸಿದ್ದ.ಸೈಬರ್ ಪೊಲೀಸ್ ಠಾಣೆಯಲ್ಲಿ ದೇವೆಂದ್ರ ಸಿಂಗ್ ಬಳಿ ಪತ್ತೆಯಾದ ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವೀರಭನ್ ತಿಳಿಸಿದ್ದಾರೆ
ದೇವೇಂದ್ರ ಸಿಂಗ್ ಪಂಜಾಬ್‌ನ ಕಾಲೇಜುವೊಂದರಲ್ಲಿ ಎಂಎ ರಾಜ್ಯಶಾಸ್ತ್ರ ವಿದ್ಯಾರ್ಥಿಯಾಗಿದ್ದು, ಕಳೆದ ವರ್ಷ ನವೆಂಬರ್‌ನಲ್ಲಿ ಪಾಕಿಸ್ತಾನದ ನಂಕಾನಾ ಸಾಹಿಬ್ ಗುರುದ್ವಾರಕ್ಕೆ ತೀರ್ಥಯಾತ್ರೆಗೆಂದು ಹೋಗಿದ್ದ. ಆಗ ಪಾಕಿಸ್ತಾನಿ ಗುಪ್ತಚರ ಏಜೆಂಟ್‌ಗಳು ಈತನೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅಂದಿನಿಂದ ಪಾಕ್ ಐಎಸ್‌ಐಗೆ ದೇವೇಂದ್ರ ಸಿಂಗ್ ನಿರಂತರವಾಗಿ ಮಾಹಿತಿ ನೀಡುತ್ತಿದ್ದ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *