ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದಲ್ಲಿ ಕೃಷಿಹೊಂಡದಲ್ಲಿ ಬಿದ್ದು 13 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತ ಬಾಲಕ ವೀರೇಶ್ (13) ಎಂದು ಗುರುತಿಸಲಾಗಿದೆ.ಕುರಿ ಮೇಯಿಸಲು ಹೋಗಿದ್ದ ವೀರೇಶ್, ನೀರು ಕುಡಿಯಲು ಕೃಷಿಹೊಂಡದ ಬಳಿಗೆ ತೆರಳಿದ್ದ.ಈ ವೇಳೆ ಆಯತಪ್ಪಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾನೆ. ಘಟನೆಯ ನಂತರ ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ವೀರೇಶ್‌ನ ಮೃತದೇಹವನ್ನು ಹೊಂಡದಿಂದ ಹೊರತೆಗೆದಿದ್ದಾರೆ.ಘಟನೆಯ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

