ತಾಳಿ ಕಟ್ಟಿ ಸಂಭ್ರಮದಲ್ಲಿರುವಾಗಲೇ ಹೃದಯಾಘಾತವಾಗಿ ವರ ಪ್ರವೀಣ ಮೃತಪಟ್ಟಿದ್ದಾನೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ಘಟನೆ ನಡೆದಿದೆ. ತಾಳಿ ಕಟ್ಟಿ ಅಂದಾಜು 20 ನಿಮಿಷ ಆದ ಬಳಿಕ ವೇದಿಕೆಯಲ್ಲಿಯೇ ಮದುಮಗ ಏಕಾಏಕಿ ಕುಸಿದು ಬಿದ್ದಿದ್ದಾನೆ. ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದೆ.ಇದ್ದಕ್ಕಿದ್ದಂತೆ ಮದುಮಗ ಪ್ರವೀಣನಿಗೆ ಎದೆನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಬೇಕು ಎನ್ನುವಾಗಲೇ ಮದುವೆ ಮಂಟಪದಲ್ಲಿಯೇ ಆತ ಸಾವು ಕಂಡಿದ್ದಾನೆ. ಕುಸಿದು ಬಿದ್ದ ಬಳಿಕ ಮಾತನಾಡದೆ ಇರುವುದನ್ನ ಗಮನಿಸಿ ತಕ್ಷಣವೇ ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ವೈದ್ಯರು ಪರೀಕ್ಷೆ ನಡೆಸಿ ಪ್ರವೀಣ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ. ಇದರ ಬೆನ್ನಲ್ಲಿಯೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕೇವಲ 20 ನಿಮಿಷ ಮಾತ್ರವೇ ಮುತ್ತೈದೆಯಾಗಿದ್ದ ವಧುವಿನ ಬಗ್ಗೆಯೂ ಮರುಕಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

