Breaking News

ಬೆಂಗಳೂರು :ಬ್ಯಾಂಕ್‌ ವ್ಯವಸ್ಥಾಪಕರ ಚಿನ್ನ ಕದ್ದಿದ್ದ ಸಹೋದ್ಯೋಗಿಗಳು ಸೆರೆ!!

ಬ್ಯಾಂಕ್‌ ಲಾಕರ್‌ನಲ್ಲಿದ್ದ ಚಿನ್ನಾಭರಣವನ್ನು ಕದ್ದಿದ್ದ ಇಬ್ಬರು ಬ್ಯಾಂಕ್‌ ನೌಕರರನ್ನು ಬಸವೇಶ್ವರ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಸವೇಶ್ವರನಗರದ ಬ್ಯಾಂಕ್‌ವೊಂದರಲ್ಲಿ ವ್ಯವಸ್ಥಾಪಕರಾಗಿದ್ದ ಸಿರಿಶಾ ಅವರು ₹16 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಅದೇ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದರು. ಜೊತೆಗೆ ಬ್ಯಾಂಕ್‌ ಚೆಕ್‌ಬುಕ್, ಪದವಿ ಪ್ರಮಾಣಪತ್ರ, ಅಂಕಪಟ್ಟಿ ಸೇರಿ ಇತರೆ ದಾಖಲೆಗಳನ್ನೂ ಅದೇ ಲಾಕರ್‌ನಲ್ಲಿ ಇಟ್ಟಿದ್ದರು. ಆರೋಪಿಗಳಿಬ್ಬರು ಸಂಚು ರೂಪಿಸಿ 2024ರ ಡಿಸೆಂಬರ್‌ನಲ್ಲಿ ಈ ಚಿನ್ನಾಭರಣ ಕಳ್ಳತನ ಮಾಡಿದ್ದರು. ಕಳವು ಮಾಡಿದ ಚಿನ್ನಾಭರಣಗಳನ್ನು ಅಗ್ರಹಾರ ದಾಸರಹಳ್ಳಿಯಲ್ಲಿ ಇರುವ ಜ್ಯುವೆಲರಿ ಅಂಗಡಿಗೆ ಮಾರಾಟ ಮಾಡಿದ್ದರು ಎಂದು ಪೊಲೀಸರು ಹೇಳಿದರು.ಬಂಧಿತರಿಂದ ₹16 ಲಕ್ಷ ಮೌಲ್ಯದ 170 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *