Breaking News

ಕೋಲಾರ: ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ!

ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ದುರ್ಮರಣ ಹೊಂದಿರುವ ಘಟನೆ ಕೋಲಾರದಲ್ಲಿ ಜರುಗಿದೆ.ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ.ರೆಡ್ಡಪ್ಪ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *