ಕೊರಾಪುಟ್ ಜಿಲ್ಲೆಯ ಸೆಮಿಲಿಗುಡಾ ಬ್ಲಾಕ್ ಹಾಗೂ ಲಕ್ಷ್ಮೀಪುರದ ಪರಡಿಗುಡಾ ಗ್ರಾಮದಲ್ಲಿಯೇ ನಾಲ್ವರು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಭತ್ತದ ಗದ್ದೆಯ ಬಳಿ ಗುಡಿಸಲಿನಲ್ಲಿ ಆಶ್ರಯ ಪಡೆದಿದ್ದಾಗ ಸಿಡಿಲುಬಡಿದು ಮೃತಪಟ್ಟಿದ್ದಾರೆ.ಒಡಿಶಾದ ಹಲವೆಡೆ ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಿದ್ದು 11 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

