Breaking News

ಏರ್ ಆಂಬ್ಯುಲೆನ್ಸ್ ಪತನ. ಪೈಲೆಟ್ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ!

ಋಷಿಕೇಶ ಏಮ್ಸ್ ನಿಂದ ಕೇದಾರನಾಥಕ್ಕೆ ಬರುತ್ತಿದ್ದ ಏರ್ ಆಂಬ್ಯುಲೆನ್ಸ್ ಕೇದಾರನಾಥ ಹೆಲಿಪ್ಯಾಡ್ ಬಳಿ ತಾಂತ್ರಿಕ ದೋಷದಿಂದ ಪತನಗೊಂಡಿದೆ.ಕೇದಾರನಾಥ ಹೆಲಿಪ್ಯಾಡ್‌ನಿಂದ 20 ಮೀಟರ್ ದೂರದಲ್ಲಿ ಈ ಘಟನೆ ಸಂಭವಿಸಿದೆ. ತುರ್ತು ವೈದ್ಯಕೀಯ ಸೇವೆಯ ಅಡಿಯಲ್ಲಿ ರೋಗಿಯನ್ನು ಕರೆದೊಯ್ಯಲು ಹೆಲಿಕಾಪ್ಟರ್ ಕೇದಾರನಾಥಕ್ಕೆ ಬರುವ ವೇಳೆ ಪತನಗೊಂಡಿದೆ.ಹೆಲಿಕಾಪ್ಟರ್ ನಲ್ಲಿ ಪೈಲಟ್, ಓರ್ವ ವೈದ್ಯ ಮತ್ತು ವೈದ್ಯಕೀಯ ಸಿಬ್ಬಂದಿ ಸೇರಿ ಮೂರೂ ಮಂದಿ ಇದ್ದರು ಎಂದು ಹೇಳಲಾಗಿದ್ದು ಅದೃಷ್ಟವಶಾತ್ ಮೂವರು ಅಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *