Breaking News

ಮಡಿಕೇರಿ : ಕೊಲೆ ಪ್ರಕರಣ; ಮಹಿಳೆ ಸೇರಿ ಮೂವರು ಆರೋಪಿಗಳ ಬಂಧನ!

ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಆರೋಪಿ ಸಂಗೀತಾ ಸಂಪತ್ ನನ್ನು ಸೋಮವಾರಪೇಟೆಯ ಹಾನಗಲ್ ಗ್ರಾಮಕ್ಕೆ ಮೇ 9ರಂದು ಬರಲು ಹೇಳುತ್ತಾಳೆ. ಇತರೆ ಆರೋಪಿಗಳಾದ ಗಣಪತಿ ಹಾಗೂ ಕಿರಣ್ ಅವರೊಂದಿಗೆ ಸೇರಿ ಕೋವಿಯಿಂದ ಬೆದರಿಸಿ, ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಕಡಿದು ಕೊಲೆ ಮಾಡುತ್ತಾರೆ. ಸಂಪತ್ ಚಲಾಯಿಸಿಕೊಂಡು ಬಂದಿದ್ದ ಕಾರಿನಲ್ಲಿ ಮೃತದೇಹ ಹಾಕಿ ಸಕಲೇಶಪುರ ತಾಲೂಕು ವಣಗೂರು ಅರಣ್ಯದ ಬಳಿ ಬರುತ್ತಾರೆ. ಮೃತದೇಹ ಎಸೆದು ಕಾರನ್ನು ಕಲ್ಲಳ್ಳಿ ಗ್ರಾಮದಲ್ಲಿ ನಿಲ್ಲಿಸಿ ತಮ್ಮ ಸಂಚಿನಂತೆ ಮೊದಲೇ ಬೆಂಗಳೂರಿನಿಂದ ಬರಮಾಡಿದ್ದ ಬೇರೊಂದು ಕಾರಿನಲ್ಲಿ ಯಾರಿಗೂ ತಿಳಿಯದಂತೆ ವಾಪಸ್‌ ಬಂದಿದ್ದಾರೆ ಎಂದು ಎಸ್‌.ಪಿ ಕೆ.ರಾಮರಾಜನ್ ವಿವರಿಸಿದರು. ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *