Breaking News

ಮದುವೆಯಾದ ಒಂದೇ ವಾರದಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಂದ ಗಂಡ!!

ಮದುವೆಯಾದ ಒಂದೇ ವಾರದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯ ಅಮೌಲಿ ಗ್ರಾಮದಲ್ಲಿ ನಡೆದಿದೆ.ಮದುವೆಯಾದ ಕೂಡಲೇ ಇಬ್ಬರ ನಡುವೆ ಜಗಳ ಆರಂಭವಾಯಿತು. ಒಂದು ದಿನ ರಾತ್ರಿ ಆರತಿ, ಆತನೊಂದಿಗೆ ಲೈಂಗಿಕ ಸಂಬಂಧ ಹೊಂದಲು ನಿರಾಕರಿಸಿದ್ದಕ್ಕೆ ಆಕೆಯ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ವಿಚಾರವನ್ನು ನರೆಹೊರೆಯವರು ತಿಳಿಸಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ, ಪೊಲೀಸರು ಆರೋಪಿ ಪತಿಯ ವಿರುದ್ಧ ಕೊಲೆ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದರು. ಮನೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬೆನ್ನಟ್ಟಿ ಹಿಡಿದು ಬಂಧಿಸಿದ್ದಾರೆ.ಮೃತಳನ್ನು ಆರತಿ ಪಾಲ್ (26) ಎಂದು ಗುರುತಿಸಲಾಗಿದೆ. ಈಕೆ ಜೌನ್​ಪುರ್​ ಜಿಲ್ಲೆಯ ನಿವಾಸಿ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *