ಆಂಧ್ರಪ್ರದೇಶದ ವಿಜಯನಗರಂ ಗ್ರಾಮೀಣ ಮಂಡಲದ ದ್ವಾರಪುಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಸಿಲುಕಿ ಮೂವರು ಬಾಲಕಿಯರು ಸೇರಿದಂತೆ ನಾಲ್ವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ನಡೆದಿದೆ.ಎಷ್ಟು ಹೊತ್ತಾದರೂ ಮಕ್ಕಳು ಬಾರದ ಕಾರಣ ಪೋಷಕರು ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಹುಡುಕಿದ ನಂತರ ಕಾರಿನಲ್ಲಿ ಸಿಲುಕಿರುವುದು ಪತ್ತೆಯಾಗಿದೆ.ಬಳಿಕ ಕಾರಿನ ಕಿಟಕಿಗಳನ್ನು ಒಡೆದು ಮಕ್ಕಳನ್ನು ಹೊರಗೆ ತಂದಿದ್ದಾರೆ. ಕೂಡಲೇ ವಿಜಯನಗರದ ಸರ್ಕಾರಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ತಪಾಸಣೆ ನಡೆಸಿದ ವೈದ್ಯರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವುದಾಗಿ ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

