Breaking News

ಮೂಲ್ಕಿ :ಲಾರಿ ಢಿಕ್ಕಿ ಬೈಕ್‌ನ ಸಹಸವಾರ ಸಾವು!

ಹಳೆಯಂಗಡಿ ಪಕ್ಷಿಕೆರೆ ಜಂಕ್ಷನ್‌ ಬಳಿ ರವಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಕಂಟೈನರ್‌ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದು ಸಹಸವಾರ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಸವಾರ ಗಾಯಗೊಂಡಿನದ್ದಾರೆ.ಗಂಭೀರವಾಗಿ ಗಾಯಗೊಂಡಿದ್ದ ಬೈಕ್‌ ಸವಾರರಿಬ್ಬರನ್ನೂ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಹಿಂಬದಿ ಸವಾರ ಸುಗಾಂದ್‌ (21) ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದರು. ಬೈಕ್‌ ಚಾಲನೆ ಮಾಡುತ್ತಿದ್ದ ಇನ್ಸಾಫ್‌ (21) ಚಿಕಿತ್ಸೆ ಪಡೆಯುತ್ತಿದ್ದಾರೆ.ಇಬ್ಬರೂ ಮೂಲ್ಕಿ ಸೈಂಟ್‌ ಆಯನ್ಸ್‌ ನರ್ಸಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಕೇರಳ ಮೂಲದವರಾಗಿದ್ದಾರೆ. ಮಂಗಳೂರು ಉತ್ತರ ಟ್ರಾಫಿಕ್‌ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *