Breaking News

ಮಂಡ್ಯ :ಬುದ್ಧಿಮಾಂದ್ಯ ಯುವತಿ ಮೇಲೆ 17 ವರ್ಷದ ಬಾಲಕನಿಂದ ಅತ್ಯಾಚಾರ!

ಬಿಡದಿಯಲ್ಲಿ ವಿಶೇಷಚೇತನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಕೇಳಿಬಂದ ಬೆನ್ನಲ್ಲೇ ಮಂಡ್ಯ ಜಿಲ್ಲೆಯಲ್ಲಿ ಬುದ್ಧಿಮಾಂದ್ಯ ಯುವತಿ ಮೇಲೆ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬ ಅತ್ಯಾಚಾರ ಎಸಗಿ, ಜಾತಿನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.ಯುವತಿ ಚೀರಾಟ ಕೇಳಿದ ಪಕ್ಕದ ಮನೆಯಲ್ಲಿದ್ದ ಯುವತಿಯ ಅಜ್ಜಿ ಬಂದು ನೋಡಿದಾಗ ಬಾಲಕನ ಕೃತ್ಯ ಬಯಲಾಗಿದೆ. ಈ ವೇಳೆ ದೌರ್ಜನ್ಯ ತಡೆಯಲು ಬಂದ ಅಜ್ಜಿ ಮೇಲೆ ಬಾಲಕ ಹಲ್ಲೆ ನಡೆಸಿದ್ದಲ್ಲದೇ ಜಾತಿನಿಂದನೆ ಮಾಡಿದ್ದಾನೆಂದು ಯುವತಿಯ ಪೋಷಕರು ಆರೋಪಿಸಿದ್ದಾರೆ.ಅಪ್ರಾಪ್ತ ವಯಸ್ಸಿನ ಬಾಲಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಬಳಿಕ ಪೊಲೀಸರು ಜಡ್ಜ್ ಮುಂದೆ ಬಾಲಕನನ್ನು ಹಾಜರುಪಡಿಸಿ, ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *