ಬಿಗ್‌ಬಾಸ್ ಮಾಜಿ ಸ್ಪರ್ಧಿ ಹಾಗೂ ಲಕ್ಷ್ಮೀ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಶಮಂತ್ ಬ್ರೋ ಗೌಡ ಅವರ ಮದುವೆ ಅದ್ಧೂರಿಯಾಗಿ ನೆರವೇರಿದೆ. ತಾವು ಪ್ರೀತಿಸಿದ್ದ ಹುಡುಗಿ ಮೇಘನಾ ಅವರೊಂದಿಗೆ ಬ್ರೋ ಗೌಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಿನ್ನೆ ಇವರ ಆರತಕ್ಷತೆ ಕೂಡ ಅದ್ಧೂರಿಯಾಗಿ ನೆರವೇರಿತ್ತು. ಇಂದು ಶಾಸ್ತ್ರೋಕ್ತವಾಗಿ ಸಪ್ತಪದಿ ತುಳಿಯುವ ಮೂಲಕ ಹೊಸ ಬದುಕಿಗೆ ಹೆಜ್ಜೆ ಇಟ್ಟಿದ್ದಾರೆ.ಮೇಘನಾ ಹಾಗೂ ಬ್ರೋ ಗೌಡ ಇಬ್ಬರೂ ಪರಸ್ಪರ ಪ್ರೀತಿಸಿ ಪೋಷಕರ ಒಪ್ಪಿಗೆ ಪಡೆದು ಮದುವೆಯಾಗಿದ್ದಾರೆ. ಕಾಲೇಜುವೊಂದರ ಕಾರ್ಯಕ್ರಮದಲ್ಲಿ ಶಮಂತ್ ಅತಿಥಿಯಾಗಿ ಆಗಮಿಸಿದ್ದರು. ಈ ವೇಳೆ ಮೇಘನಾ ಅವರನ್ನು ಭೇಟಿಯಾಗಿ ಪರಿಚಯವಾಗಿತ್ತು. ಅಲ್ಲಿಂದ ಇಬ್ಬರ ನಡುವೆ ಸ್ನೇಹ ಶುರುವಾಗಿ ಪ್ರೀತಿಗೆ ತಿರುಗಿತ್ತು. ಬಳಿಕ ಇಬ್ಬರೂ ತಮ್ಮ ಪೋಷಕರಿಗೆ ವಿಷಯ ತಿಳಿಸಿ ಮದುವೆಯಾಗಲು ನಿರ್ಧರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

