ಉತ್ತರ ಪ್ರದೇಶದ ಬಲಿಯಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಪ್ರತ್ಯೇಕ ಘಟನೆಯೊಂದರಲ್ಲಿ, ಮೊಬೈಲ್ ಫೋನ್ ಬಳಸಿದ್ದಕ್ಕಾಗಿ ತಾಯಿ ಗದರಿಸಿದ್ದರಿಂದ 17 ವರ್ಷದ ಬಾಲಕಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪಿಟಿಐ ವರದಿ ಮಾಡಿದೆ.ವರದಿಯ ಪ್ರಕಾರ, ಮೊಬೈಲ್ ಫೋನ್ ಸದಾ ಬಳಸುತ್ತಿರುವುದಕ್ಕೆ ತಾಯಿ ಆಗಾಗ ಗದರಿಸುತ್ತಿದ್ದರು ಹಾಗಾಗಿ ಬಾಲಕಿ ಅಸಮಾಧಾನಗೊಂಡಿದ್ದಳು. ಅವಳು ತನ್ನ ಮನೆಯಿಂದ ಸ್ವಲ್ಪ ದೂರ ಹೋಗಿ ಕಾಲುವೆಯ ಬಳಿ ವಿಷ ಸೇವಿಸಿದ್ದಳು. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾಳೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

