Breaking News

ಮಡಿಕೇರಿ :ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ!

ವ್ಯಕ್ತಿಯೋರ್ವ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.ಮೂರು ವರ್ಷದ ಮಗಳಿಗೆ ಅನಾರೋಗ್ಯ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ವಾರದ ಹಿಂದೆ ಚಿಕಿತ್ಸೆಗಾಗಿ ಬೆಂಗಳೂರಿಗೆ ಬಂದಿದ್ದರು. ನಿನ್ನೆ ಮಧು ಅವರ ತಾಯಿ ಕೂಡ ಬೆಂಗಳೂರಿಗೆ ಆಗಮಿಸಿದ್ದರು. ಮನೆಯಲ್ಲಿ ಯಾರೂ ಇರಲಿಲ್ಲ. ಜೀವನದಲ್ಲಿ ಜಿಗುಪ್ಸೆಗೊಂಡು ಕಂಠಪೂರ್ತಿ ಕುಡಿದು ಡಬಲ್ ಬ್ಯಾರಲ್ ಬಂದೂಕಿನಿಂದ ತನಗೆ ತಾನೇ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದಾರೆ.ಘಟನಾ ಸ್ಥಳಕ್ಕೆ ಸೋಮವಾರಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *