ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದಾಗ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನ ಮೇಲೆ ಗುಂಡಿನ ದಾಳಿ ನಡೆಸಿ ಸೆರೆಹಿಡಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹಳೆ ಹೊನ್ನೂರಿನಲ್ಲಿ ನಡೆದಿದೆ.ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಗುಂಡಿನ ದಾಳಿ ನಡೆದಿದೆ. ಬಂಧಿಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಹಿನ್ನೆಲೆಯಲ್ಲಿ ಮಂಜನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಹೊಳೆ ಹೊನ್ನೂರು ಪಿಐಲಕ್ಷ್ಮಿಪತಿ ಆರೋಪಿ ಮಂಜನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

