ಮಾವಿನಕಾಯಿ ಕೊಯ್ಯುವ ವಿಚಾರದಲ್ಲಿ ಶುರುವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಶಂಕಹಳ್ಳಿ ಗ್ರಾಮದಲ್ಲಿ ನಡೆದಿದೆ.ಜಮೀನು ವಿಚಾರದಲ್ಲಿ ವಿವಾದ ಶುರುವಾಗಿ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವೇಳೆ ಮಲ್ಲೇಶ್ ಜಮೀನಿನಲ್ಲಿದ್ದ ಮಾವಿನ ಮರದಿಂದ ಕಾಯಿಗಳನ್ನ ಕೀಳಿಸುವಾಗ ಚೇತನ್ ಕಿರೀಕ್ ತೆಗೆದಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಚೇತನ್ ಜೊತೆ ಸರಿತಾ, ಪ್ರವೀಣ, ಪವನ್, ಮಂಜುಳ, ಕರಿಗೌಡ ಸಹ ಸೇರಿ ಗಲಾಟೆ ಮಾಡಿದ್ದಾರೆ. ಈ ವೇಳೆ ಚೇತನ್ ತನ್ನ ಬಳಿ ಇದ್ದ ಚಾಕುವಿನಿಂದ ಮಲ್ಲೇಶ್ ಗೆ ಇರಿದು ಪರಾರಿಯಾಗಿದ್ದಾನೆ.ಮಲ್ಲೇಶ್ ಮೃತ ದುರ್ದೈವಿ. ಕೊಲೆ ಆರೋಪಿ ಚೇತನ್ ಇದೀಗ ಪೊಲೀಸರ ವಶದಲ್ಲಿದ್ದಾನೆ
bigtvnews | Hubli Dharwad News | Kannada News | Karnataka News Hubli News | News In Hubli | Local news

