Breaking News

ಚಿತ್ರದುರ್ಗ :ತಂಬಾಕು ಮಾರಾಟ ಅಂಗಡಿಗಳಿಗೆ ದಾಳಿ : 35 ಪ್ರಕರಣ ದಾಖಲು, ರೂ.4 ಸಾವಿರ ದಂಡ ವಸೂಲಿ!

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚಿತ್ರದುರ್ಗ ನಗರದ ಸಂತೆ ಮೈದಾನದ ಹತ್ತಿರ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ಮಾಡಿ ದಂಡ ವಿಧಿಸಿದೆ.ಯುವಜನತೆಯು ಅತೀ ಹೆಚ್ಚಾಗಿ ತಂಬಾಕಿನ ದುಶ್ಚಟಗಳಿಗೆ ಒಳಗಾಗುತ್ತಿದ್ದಾರೆ. ಇದರಿಂದಾಗಿ ಸಮಾಜದಲ್ಲಿ ಸಾವಿನ ಸಂಖ್ಯೆಯಲ್ಲಿ ಹೆಚ್ಚಾಗಿ ಯುವಕರೇ ಬಲಿಯಾಗುತ್ತಿದ್ದಾರೆ ಎಂದು ಯುವಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುತ್ತಾ ತಂಬಾಕು ಕಾರ್ಯಾಚರಣೆ ನಡೆಸಿದರು.ಸೆಕ್ಷನ್-4 ಅಡಿಯಲ್ಲಿ 29 ಕೇಸುಗಳನ್ನು ದಾಖಲಿಸಿ ರೂ. 3250 ದಂಡವನ್ನು ಮತ್ತು ಸೆಕ್ಷನ್-6ಎ ಅಡಿಯಲ್ಲಿ 06 ಕೇಸುಗಳನ್ನು ದಾಖಲಿಸಿ ರೂ. 750 ದಂಡವನ್ನು ವಸೂಲಿ ಮಾಡಲಾಯಿತು.ತಂಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದ ಅಧಿಕಾರಿಗಳಾದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ.ಪ್ರಭುದೇವ, ಸಮಾಜ ಕಾರ್ಯಕರ್ತ ಕೆ.ಎಂ.ತಿಪ್ಪೇಸ್ವಾಮಿ, ಜಿಲ್ಲಾ ಸರ್ವೇಕ್ಷಣಾ ಘಟಕದ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ವೆಂಕಟೇಶ್, ಎಂ.ಹೆಚ್.ಮಂಜುನಾಥ, ತಾಲ್ಲೂಕು ಆರೋಗ್ಯಾಧಿಕಾಧಿಕಾರಿಗಳ ಕಚೇರಿ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಕೆ.ಪ್ರವೀಣ್ ಇದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *