ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಅವರಿಗೆ 13 ವರ್ಷದ ಹಿಂದೆ ರಸ್ತೆ ಬದಿಯಲ್ಲಿ 3 ದಿನದ ಹೆಣ್ಣುಮಗುವೊಂದು ಸಿಕ್ಕಿತ್ತು. ಕಾನೂನುಪ್ರಕಾರವೇ ಆ ಮಗುವನ್ನು ದತ್ತು ಪಡೆದ ಅವರು ಆ ಅನಾಥ ಮಗುವಿಗೆ ತಾಯಿಯಾದರು. ಅಮ್ಮನಿಗೆ ಬೇಡವಾಗಿ ಬಿದ್ದಿದ್ದ ಆ ಹೆಣ್ಣು ಶಿಶುವಿನ ಜೀವನಕ್ಕೆ ಆಧಾರವಾದರು. ಒಳ್ಳೆಯ ಶಾಲೆಗೆ ಸೇರಿಸಿ ಉತ್ತಮ ಶಿಕ್ಷಣವನ್ನೂ ಕೊಡಿಸಿದರು. 13 ವರ್ಷದ ಆಕೆ ಈಗ 8ನೇ ಕ್ಲಾಸ್ ಓದುತ್ತಿದ್ದಳು. ಮನೆಯಲ್ಲಿ ಎಷ್ಟೇ ಒಳ್ಳೆಯ ಸಂಸ್ಕಾರ ಹೇಳಿಕೊಟ್ಟರೂ ಮನೆಯಿಂದ ಹೊರಗೆ ಹೋದಾಗ ಆಕೆ ಹುಡುಗರೊಂದಿಗೆ ಓಡಾಡುತ್ತಾ, ಮಜಾ ಮಾಡುತ್ತಾ, ಕ್ಲಾಸ್ಗೆ ಬಂಕ್ ಮಾಡುತ್ತಾ ಸ್ವೇಚ್ಛಾಚ್ಛಾರದ ಜೀವನ ನಡೆಸುತ್ತಿದ್ದಳು.ಅಮ್ಮ ಬುದ್ಧಿ ಹೇಳಿದಾಗ ಕೋಪಗೊಂಡ 13 ವರ್ಷದ ಬಾಲಕಿ ನನಗೆ ಬುದ್ಧಿ ಹೇಳಲು ನೀನೇನು ನನ್ನ ಹೆತ್ತ ತಾಯಿಯೇ? ಎಂದು ಕೇಳಿ ಗಲಾಟೆ ಮಾಡಿದ್ದಳು. ಹೆತ್ತ ಮಗಳಿಗಿಂತ ಹೆಚ್ಚಾಗಿ ಸಾಕಿದ್ದರೂ ಮಗಳು ಈ ರೀತಿ ವರ್ತಿಸಿದ್ದು ರಾಜಲಕ್ಷ್ಮಿಗೆ ಬೇಸರ ತಂದಿತ್ತು. ತನ್ನ ತಾಯಿ ಈ ರೀತಿ ಹೇಳುತ್ತಿದ್ದಾರೆಂದು ಶಾಲೆಯಲ್ಲಿ ತನ್ನ ಇಬ್ಬರು ಬಾಯ್ಫ್ರೆಂಡ್ಗೆ ಹೇಳಿದ ಆ ಬಾಲಕಿ ಅವರ ಜೊತೆ ಸೇರಿ ತಾಯಿಯನ್ನೇ ಕೊಲ್ಲಲು ಪ್ಲಾನ್ ಮಾಡಿದ್ದಳು.ಇಬ್ಬರು ಹುಡುಗರ ಜೊತೆ ಸಂಬಂಧ ಇಟ್ಟುಕೊಂಡಿದ್ದನ್ನು ರಾಜಲಕ್ಷ್ಮಿ ವಿರೋಧಿಸಿದ್ದೇ ಈ ಕೊಲೆಗೆ ಕಾರಣ ಎನ್ನಲಾಗಿದೆ. ಹಾಗೇ, ಆಕೆ ಸಾಕು ತಾಯಿಯಾಗಿದ್ದರಿಂದ ಆಕೆಯ ಆಸ್ತಿಯನ್ನು ತನ್ನದಾಗಿಸಿಕೊಳ್ಳಲು ಈ ಕೊಲೆ ಮಾಡಿದ್ದಾಳೆಂಬ ಆರೋಪವೂ ಇದೆ.ಆರೋಪಿಗಳಾದ 13 ವರ್ಷದ ಹುಡುಗಿ, ದೇವಾಲಯದ ಅರ್ಚಕ ಗಣೇಶ್ ರಾತ್ (21) ಮತ್ತು ಅವನ ಸ್ನೇಹಿತ ದಿನೇಶ್ ಸಾಹು (20) ಅವರನ್ನು ಬಂಧಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

