ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳು ಹಾಗೂ ಮತ್ತೊಂದು ಗ್ಯಾಂಗ್‌ನ ನಡುವೆ ಘರ್ಷಣೆ ನಡೆದಿರುವುದಾಗಿ ವರದಿಯಾಗಿದೆ.ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ನೌಶಾದ್ ಮೇಲೆ ಹಲವಾರು ಕೈದಿಗಳು ಹಲ್ಲೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಮಾಹಿತಿ ತಿಳಿದ ಕೂಡಲೇ ಸಹಾಯಕ ಪೊಲೀಸ್ ಆಯುಕ್ತ ಪ್ರತಾಪ್ ಸಿಂಗ್ ಥೋರಟ್ ಜೈಲಿಗೆ ತಕ್ಷಣ ಆಗಮಿಸಿದ್ದು,ಗಲಾಟೆಯ ನಂತರ, ಪೊಲೀಸರು ಜೈಲಿನ ಆವರಣದ ಸುತ್ತಲೂ ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.ಈ ಘಟನೆಯ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಬೇಕಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

