Breaking News
Oplus_131072

ಬೆಳಗಾವಿ : ಬಾಲಕಿಯನ್ನು ರೆಸಾರ್ಟ್’ಗೆ ಕರೆದೊಯ್ದು ಗ್ಯಾಂಗ್ ರೇಪ್.!

15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಈ ಘಟನೆ ನಡೆದಿದೆ. ಸಾಕೀಬ್ ಎಂಬ ಆರೋಪಿ ಸೇರಿ ಇಬ್ಬರು ಅಪ್ತಾಪ್ತರು ಸೇರಿ ಮೂವರು ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ ಎನ್ನಲಾಗಿದೆ.ಬಾಲಕಿಯ ಸ್ನೇಹಿತ ಹೇಗೋ ಬಾಲಕಿಯನ್ನು ಪುಸಲಾಯಿಸಿ ರೆಸಾರ್ಟ್ ಗೆ ಕರೆ ತಂದಿದ್ದಾನೆ. ಸಾಕೀಬ್ ಮೊದಲೇ ರೆಸಾರ್ಟ್ ನಲ್ಲಿ ರೂಮ್ ಬುಕ್ ಮಾಡಿದ್ದ. ನಂತರ ಬಾಲಕಿಯನ್ನು ರೆಸಾರ್ಟ್ ಗೆ ಕರೆತಂದು ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗಿದೆ. ಸದ್ಯ,ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮತ್ತೋರ್ವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *