Breaking News

ಮೂಡಿಗೆರೆ :ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ KSRTC ಬಸ್!

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಭಾರೀ ಮಳೆಯಿಂದಾಗಿ ನಿಯಂತ್ರಣ ತಪ್ಪಿದ KSRTC ಬಸ್ ಕಾರಿಗೆ ಡಿಕ್ಕಿ ಹೊಡೆದು ರಸ್ತೆ ಬದಿಗೆ ಜಾರಿದ ಘಟನೆ ಇಂದು ನಡೆದಿದೆ.ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ಎದುರಿನಿಂದ ಬಂದ ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ನಂತರ ರಸ್ತೆ ಬದಿಗೆ ಜಾರಿದೆ.ಈ ಅಪಘಾತದಲ್ಲಿ ಕಾರು ಚಾಲಕ ಸೇರಿ ಬಸ್‌ನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಭಾಗ್ಯವಷಾತ್ ಹೆಚ್ಚಿನ ಪ್ರಾಣಹಾನಿ ಸಂಭವಿಸಿಲ್ಲ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *