Breaking News

ಅಮರಾವತಿ : ದಲಿತ ವಿದ್ಯಾರ್ಥಿ ಮೇಲೆ ಅಮಾನವೀಯ ಹಲ್ಲೆ!

ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ದಲಿತ ಬಿ.ಟೆಕ್ ವಿದ್ಯಾರ್ಥಿಯನ್ನು ಅಪಹರಿಸಿ, ಥಳಿಸಿ ಮೂತ್ರ ಕುಡಿಸಿರುವಂತಹ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಜೇಮ್ಸ್‌, ತನ್ನ ಜೂನಿಯರ್ ವಿದ್ಯಾರ್ಥಿಗಳು ಮತ್ತು ಕ್ರಿಮಿನಲ್‌ಗಳ ಗುಂಪೊಂದು ತನ್ನನ್ನು ಅಪಹರಿಸಿ ಕ್ರೂರ ಚಿತ್ರಹಿಂಸೆ ನೀಡಿದ್ದಾಗಿ ಆರೋಪಿಸಿದ್ದಾರೆ. ಜಾತಿ ಆಧಾರಿತ ದ್ವೇಷದಿಂದ ಈ ಹಲ್ಲೆ ನಡೆದಿದೆ ಎಂದು ವರದಿಯಾಗಿದೆ. ಈ ಹಿಂದೆ ಜೇಮ್ಸ್‌ ಜಾತಿ ನಿಂದನೆಯನ್ನು ಅನುಭವಿಸಿದ್ದಾಗಿ ಹೇಳಿಕೊಂಡಿದ್ದು, ತನ್ನನ್ನು ಗೌರವಯುತವಾಗಿ ನಡೆಸಿಕೊಳ್ಳುವಂತೆ ಪದೇ ಪದೇ ವಿನಂತಿಸಿಕೊಂಡರೂ ಕಿರುಕುಳ ಹೆಚ್ಚಾಗಿದ್ದಾಗಿ ವಿವರಿಸಿದ್ದಾರೆ.ಈ ಬಗ್ಗೆ ಜೇಮ್ಸ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲು ಹೋದಾಗ ಪೊಲೀಸರು ನಿರ್ಲಕ್ಷ್ಯ ತೋರಿದ್ದಾಗಿ ತಿಳಿಸಿದ್ದಾರೆ.ಜೇಮ್ಸ್‌ ತನಗಾದ “ಕಿರುಕುಳದ ಬಗ್ಗೆ ವಿವರಿಸುವ ವಿಡಿಯೋ ವೈರಲ್‌ ಆಗುತ್ತಿದ್ದಂತೆ ಭಾರೀ ಆಕ್ರೋಶ ವ್ಯಕ್ತವಾಗಿದೆ”. ಈ ನಡುವೆ ತಿರುಚನೂರು ಪೊಲೀಸರು ತನಿಖೆ ನಡೆಯುತ್ತಿದೆ ಎಂದು ದೃಢಪಡಿಸಿದ್ದಾರೆ ಮತ್ತು ಭಾಗಿಯಾಗಿರುವ ಎಲ್ಲ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *