ತಾನು ವಾಸಿಸುತ್ತಿದ್ದ ಸ್ಥಳದಲ್ಲಿ ತನ್ನ ಸ್ನೇಹಿತರು ಅವರ ಮಕ್ಕಳಿಗಾಗಿ ಶಾಲಾ, ಕಾಲೇಜು ಶುಲ್ಕವನ್ನು ಕಟ್ಟಲು ಪರದಾಡುತ್ತಿರುವುದನ್ನು ನೋಡಿದ್ದ. ಕಳ್ಳತನ ಮಾಡಿ 20 ಮಕ್ಕಳ ಶಾಲಾ, ಕಾಲೇಜು ಶುಲ್ಕ ಪಾವತಿಸಿದ್ದ ಪ್ರಕರಣದಡಿ ಆರೋಪಿಯನ್ನು ಇಲ್ಲಿನ ಬ್ಯಾಡರಹಳ್ಳಿ ಠಾಣಾ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.ತಮಿಳುನಾಡಿನಲ್ಲಿ 22 ಲಕ್ಷಕ್ಕೆ ಚಿನ್ನ ಮಾರಾಟ ಮಾಡಿಸಿದ್ದ ಶಿವು ಬಂದ ಹಣದಲ್ಲಿ ವಿವೇಕ್ಗೆ 4 ಲಕ್ಷ ರೂ., ಅನಿಲ್ಗೆ 4 ಲಕ್ಷ ರೂ. ಮೌಲ್ಯದ ಆಟೋ ಕೊಡಿಸಿದ್ದ. ಉಳಿದ 14 ಲಕ್ಷ ರೂ. ಹಣದಲ್ಲಿ ತನ್ನ ಬಡಾವಣೆಯ 20 ಮಕ್ಕಳಿಗೆ ಶಾಲಾ ಹಾಗೂ ಕಾಲೇಜು ಶುಲ್ಕ ಕಟ್ಟಿದ್ದಾನೆ.ಈ ಸಂಬಂಧ ಬಂದ ದೂರಿನನ್ವಯ ಬ್ಯಾಡರಹಳ್ಳಿ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಕ್ರಮ ಜರುಗಿಸಿರುವುದಾಗಿ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

