Breaking News

ಛತ್ತೀಸ್‌ಗಢದ ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿ, 27 ನಕ್ಸಲೀಯರು ಹತ್ಯೆ!

ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ ಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಕನಿಷ್ಠ 27 ನಕ್ಸಲರು ಮೃತಪಟ್ಟಿದ್ದಾರೆ.ರಾಜ್ಯ ಪೊಲೀಸರು ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಚಕಮಕಿಯಲ್ಲಿ ಪೊಲೀಸರ ಬೆಂಬಲಿಗ ಮೃತಪಟ್ಟಿದ್ದಾರೆ ಮತ್ತು ಒಬ್ಬರು ಪೊಲೀಸರಿಗೆ ಗಾಯವಾಗಿದೆ ಎಂದು ಪೊಲೀಸರು ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.ಇಂದು ನಸುಕಿನ ಜಾವ ಆರಂಭವಾದ ಎನ್‌ಕೌಂಟರ್ ಇನ್ನೂ ಮುಂದುವರೆದಿದೆ.

Share News

About BigTv News

Check Also

ಕುಷ್ಟಗಿಯಲ್ಲಿ ಘೋರ ದುರಂತ: ಮೂವರು ಮಕ್ಕಳಿಗೆ ವಿಷ ಕುಡಿಸಿ ತಂದೆಯೂ ಆತ್ಮಹತ್ಯೆಗೆ ಯತ್ನ!

ಕುಷ್ಟಗಿ ತಾಲೂಕಿನ ನೀರಲೂಟಿ ಗ್ರಾಮದಲ್ಲಿ ಮದ್ಯವ್ಯಸನಿ ತಂದೆಯೊಬ್ಬ ತನ್ನ 10, 8 ಮತ್ತು 5 ವರ್ಷದ ಮೂವರು ಮಕ್ಕಳಿಗೆ ವಿಷ …

Leave a Reply

Your email address will not be published. Required fields are marked *