Breaking News

ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ, ನಟ ದರ್ಶನ್‌ ಜಾಮೀನು ರದ್ದಾಗುತ್ತಾ?

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ತೂಗುದೀಪ ಹಾಗೂ ಇನ್ನಿತರ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದಾರೆ. ಆದರೆ ದರ್ಶನ್ ಸೇರಿದಂತೆ ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಪೊಲೀಸರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಕೈಗೆತ್ತಿಕೊಂಡಿದೆ.ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌, ದರ್ಶನ್‌ ಹಾಗೂ ಪ್ರಕರಣದ ಆರೋಪಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.ಈ ಕೇಸ್‌ ಕುರಿತಂತೆ ಮೊದಲ ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳನ್ನು ಉಲ್ಲೇಖಿಸಲಾಗಿತ್ತು. ಈಗ 10 ಮಂದಿ ಹೆಚ್ಚುವರಿ ಸಾಕ್ಷಿದಾರರ ಹೇಳಿಕೆಯನ್ನು ಕೂಡ ಇದರಲ್ಲಿ ದಾಖಲಿಸಲಾಗಿದೆ. ಮುಖ್ಯವಾಗಿ ಈ ಕೇಸ್‌ಗೆ ತಿರುವು ನೀಡಬಲ್ಲ ಕೆಲವು ಪೋಟೋಗಳು, ಎಫ್‌ಎಸ್‌ಎಲ್‌ ವರದಿ, ದೂರವಾಣಿ ಕರೆಗಳ ವಿವರ ಸೇರಿಗಳು ಸೇರಿ ಹಲವು ದಾಖಲೆಗಳನ್ನು ಸೇರ್ಪಡೆ ಮಾಡಲಾಗಿದೆ. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಪ್ರಸ್ತಾಪಿಸಿ, ಆರೋಪಿಗಳ ಜಾಮೀನು ರದ್ದು ಮಾಡುವಂತೆ ವಾದಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *