Breaking News

ಬೆಂಗಳೂರು : ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ರೇಪ್ ಕೇಸ್!

ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬರುತ್ತಿದೆ. ಇದೀಗ 40 ವರ್ಷದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಅನ್ವಯ ಆರ್‌ಎಮ್‌ಸಿ ಯಾರ್ಡ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.ಅಪರಿಚಿತ ವ್ಯಕ್ತಿಯಿಂದ ಇಂಜೆಕ್ಷನ್ ತರಿಸಿ ಇಂಜೆಕ್ಟ್ ಮಾಡಿಸಿದ್ದರೆಂದು ದೂರಿನಲ್ಲಿ ದಾಖಲಾಗಿದೆ.ಅತ್ಯಾಚಾರಕ್ಕೂ ಮುನ್ನ ನೀಡಿದ ಇಂಜೆಕ್ಷನ್​ನಿಂದ ಈಗ ನನಗೆ ಇಡಿಆರ್ ಎಂಬ ಕಾಯಿಲೆ ಬಂದಿದೆ. ಇದ್ರಿಂದ ಮನನೊಂದ ನಾನು ಆತ್ಮಹತ್ಯೆಗೆ ಯತ್ನಿಸಿದ್ದೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಈ ಹಿಂದೆ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮಿದೇವಿನಗರ ವಾರ್ಡ್​ನ ಡಿ ದೇವರಾಜು ಅರಸು ಟ್ರಕ್ ಟರ್ಮಿನಲ್​ ಪ್ರದೇಶದ ಘನ ತ್ಯಾಜ್ಯ ಸಂಗ್ರಹಣ ಮತ್ತು ವಿಲೇವಾರಿ ಗುತ್ತಿಗೆ ಪಡೆದು ಕೆಲಸ ಮಾಡುತ್ತಿದ್ದೆ. ಶಾಸಕ ಮುನಿರತ್ನ 36 ಲಕ್ಷ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟು ಕಿರುಕುಳ ನೀಡಿದ್ದಾರೆ ಎಂದು ಚಲುವರಾಜು ಆರೋಪಿಸಿದ್ದರು. ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಹೇಳಿಕೆ ದಾಖಲಿಸಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *