Breaking News

ಆನೇಕಲ್ : ಸೂಟ್‌ಕೇಸ್‌ನಲ್ಲಿ 16 ವರ್ಷದ ಬಾಲಕಿಯ ಶವ ಪತ್ತೆ!

ಚಂದಾಪುರದ ರೈಲ್ವೆ ಸೇತುವೆ ಬಳಿ ಬುಧವಾರ ಅನಾಥವಾಗಿ ಬಿದ್ದಿದ್ದ ಸೂಟ್‌ಕೇಸ್‌ನಲ್ಲಿ ಸುಮಾರು 16 ವಯಸ್ಸಿನ ಬಾಲಕಿಯ ಶವ ಪತ್ತೆಯಾಗಿದೆ.ಬಾಲಕಿಯ ಕೈಕಾಲು ಮಡಚಿ ಸೂಟ್‌ಕೇಸ್‌ನಲ್ಲಿ ತುಂಬಲಾಗಿದ್ದು, ಕಿವಿ ಮತ್ತು ಮೂಗಿನಲ್ಲಿ ರಕ್ತಸ್ರಾವವಾಗಿರುವ ಕುರುಹುಗಳಿವೆ.ಬಾಲಕಿಯನ್ನು ಬೇರೆಡೆ ಕೊಲೆ ಮಾಡಿದ ನಂತರ ಶವವನ್ನು ಸೂಟ್‌ಕೇಸ್‌ನಲ್ಲಿಟ್ಟು ರೈಲಿನಿಂದ ಎಸೆದಿರಬಹುದು ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಮತ್ತು ಸೂರ್ಯ ಸಿಟಿ ಪೊಲೀಸರು ಶಂಕಿಸಿದ್ದಾರೆ. ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದ ನೀಲಿ ಬಣ್ಣದ ಸೂಟ್‌ಕೇಸ್‌ ತೆರೆದುಕೊಂಡಿತ್ತು. ಅದರಲ್ಲಿ ಬಾಲಕಿಯ ಮುಖ ಕಂಡು ಸೂರ್ಯಸಿಟಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ವಿವಿಧ ಆಯಾಮಗಳಿಂದ ತನಿಖೆ ನಡೆಸಬೇಕಾಗಿದೆ ಎಂದು ಇನ್‌ಸ್ಟೆಕ್ಟರ್ ಮಹಾಜನ್ ತಿಳಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *