Breaking News

ಹೊಸನಗರ: ಕಾರುಗಳ ಮುಖಾಮುಖಿ, ನಾಲ್ವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ!

ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಗಂಭೀರಗೊಂಡು ನಾಲ್ವರು ಗಾಯಗೊಂಡ ಘಟನೆ ಹೆರಟೆ ಸೇತುವೆ ಸಮೀಪ ಮಂಗಳವಾರ ಮಧ್ಯಾಹ್ನ ನಡೆದಿದೆ.ಕುಂದಾಪುರ ಕಡೆ ಹೊರಟಿದ್ದ ಕಾರಿನಲ್ಲಿ ಅಲ್ಪಾಜ್, ಇರ್ಫಾನ್ ಇಬ್ಬರು ಇದ್ದು ಅಲ್ಫಾಜ್ ಗೆ ಹೊಟ್ಟೆಭಾಗಕ್ಕೆ ಬಲವಾದ ಪೆಟ್ಟು ಬಿದ್ದು ಗಂಭೀರ ಗಾಯವಾಗಿದೆ. ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇರ್ಫಾನ್ ಕೂಡ ಗಾಯಗೊಂಡಿದ್ದಾನೆ.ಕೊಡಚಾದ್ರಿ ಕಡೆ ಹೊರಟಿದ್ದ ಕಾರಿನಲ್ಲಿ ಮಂಜುನಾಥ್, ಯಶ್, ಮೋಹನ್ ಸೇರಿದಂತೆ ಮೂವರು ಇದ್ದು ಮೋಹನ್ ಎಂಬುವವರ ತಲೆಗೆ ಪೆಟ್ಟಾಗಿದ್ದು, ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರ ಕೈಗಳಿಗೆ ಗಾಯಗಳಾಗಿವೆ.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *