ಕಾಮುಕನೊಬ್ಬ ಮಾನಸಿಕ ಅಸ್ವಸ್ಥೆ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಬುಧವಾರ ನಡೆದಿದೆ.ಮಾನಸಿಕ ಅಸ್ವಸ್ಥೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಟಂ ಟಂ ನಲ್ಲಿ ಹೋಗುತ್ತಿರುವ ಯುವಕರು ಇದನ್ನು ವಿಡಿಯೋ ತೆಗೆಯಲು ಮುಂದಾಗಿದ್ದಾಗ ಅಲ್ಲಿಂದ ಮೊಬೈಲ್‌ನಲ್ಲಿ ಮಾತನಾಡುತ್ತಾ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿದ್ದರಿಂದ ಎಚ್ಚೇತ್ತ ಪೊಲೀಸರು ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ಮಾಡಿದ್ದಾರೆ. ನಂತರ ಸಿಡಿಪಿಒ ವಿರುಪಾಕ್ಷಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದು, ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

