Breaking News

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ “ಡಾ. ಎಂ ಎ ಸಲೀಂ” ನೇಮಕ.

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ ಎ ಸಲೀಂ ನೇಮಕ ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್​ ಅಧಿಕಾರಿ ಹಾಗೂ ಕನ್ನಡಿಗ ಡಾ. ಎಂ ಎ ಸಲೀಂ

(M A Salim) ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ ಎ ಸಲೀಂ ಅವರು ಬುಧವಾರವೇ (ಮೇ.21) ಅಧಿಕಾರಿ ವಹಿಸಿಕೊಂಡಿದ್ದಾರೆ. ಡಾ. ಎಂ. ಎ ಸಲೀಂ ಅವರು ಸದ್ಯ ಹಂಗಾಮಿ ಡಿಜಿ & ಐಜಿಯಾಗಿದ್ದಾರೆ. ಡಾ. ಅಲೋಕ್  ಮೋಹನ್​ ಅವರು ನೂತನ ಡಿಜಿಪಿ ಡಾ. ಎಂ. ಎ ಸಲೀಂ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಐಪಿಎಸ್​ ಅಧಿಕಾರಿ, ಕರ್ನಾಟಕದ ಪೊಲೀಸ್​ ಮಹಾನಿರ್ದೇ ಶಕರಾಗಿರುವ ಡಾ. ಅಲೋಕ ಮೋಹನ್​ ಅವರು ಬುಧವಾರವೇ ಸೇವೆಯಿಂದ ನಿವೃತ್ತರಾಗಿದ್ದಾರೆ.
ಡಾ. ಎಂ. ಎ ಸಲೀಂ ಅವರು 1966ರ ಜೂನ್​ 25 ರಂದು ಬೆಂಗಳೂರಿನ ಚಿಕ್ಕಬಾಣವರದಲ್ಲಿ ಜನಿಸಿದರು. 1998ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1993ರಲ್ಲಿ ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಪೊಲೀಸ್ ನಿರ್ವಹಣೆ ಕುರಿತು ಸ್ನಾತಕೋತ್ತರ ಪದವಿ ಪಡೆದ ಅವರು 2010ರಲ್ಲಿ ಬೆಂಗಳೂರು ವಿಶ್ವವಿದ್ಯಾನಿ ಲಯದಿಂದ ಟ್ರಾಫಿಕ್​ ಮ್ಯಾನೇಜ್ಮೆಂಟ್​ ವಿಷಯದಲ್ಲಿ ಡಾಕ್ಟರೇಟ್​ ಪದವಿಯನ್ನು ಪಡೆದುಕೊಂಡಿದ್ದಾರೆ.
ಡಾ. ಎಂ ಎ ಸಲೀಂ ಅವರು 1993ನೇ ಸಾಲಿನ ಕರ್ನಾಟಕ ಕೇಡರ್​ನ ಅಧಿಕಾರಿಯಾಗಿದ್ದಾರೆ. ಡಾ. ಎಂ ಎ. ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *