Breaking News

ವಿಟ್ಲ :ಪೆಟ್ರೋಲ್ ತುಂಬಿಸಿ ಹಣ ನೀಡದ ಪರಾರಿಯಾದ ಕಾರು ಅಪಘಾತ!!

ಇಂಧನ ತುಂಬಿಸಿ ಪೆಟ್ರೋಲ್ ಬಂಕ್ ಗೆ ಹಣ ನೀಡದೆ ಪರಾರಿಯಾದ ಕಾರೊಂದು ಅಪಘಾತಕ್ಕೀಡಾಗಿ ಅದರಲ್ಲಿದ್ದ ಯುವಕರಿಬ್ಬರು ಪೊಲೀಸರ ಅತಿಥಿಗಳಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿರುವುದು ವರದಿಯಾಗಿದೆ.ದ್ವಿಚಕ್ರ ವಾಹನವೊಂದಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ದ್ವಿಚಕ್ರ ವಾಹನ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಸ್ಥಳಕ್ಕೆ 112 ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರಿನಲ್ಲಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ತಿಳಿದುಬಂದಿದೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *