Breaking News

ಕುಡಿದ ಮತ್ತಿನಲ್ಲಿ ತಾಯಿಯನ್ನೇ ತುಳಿದು ಕೊಂದ ಪಾಪಿ ಮಗ!

ಮದ್ಯವ್ಯಸನಿಯಾಗಿದ್ದ ಮಣಿಕಂದನ್​​ ಸದಾ ಕುಡಿದ ಅಮಲಿನಲ್ಲಿ ಇರುತ್ತಿದ್ದ. ನಿನ್ನೆ ರಾತ್ರಿ ಕೂಡ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಮಣಿಕಂದನ್ ತಾಯಿ ಓಮನಾ ಜೊತೆ ಜಳಗ ತೆಗೆದಿದ್ದು, ಆಕೆಯನ್ನು ಮನಬಂದಂತೆ ಒದ್ದು, ತುಳಿದು ಹಾಕಿದ್ದಾನೆ.ಮಗನಿಂದ ತುಳಿತಕ್ಕೊಳಗಾಗಿ ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದ ಓಮನಾಳನ್ನು ಸ್ಥಳೀಯರು ಕೂಡಲೇ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್‌ ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೇ ಓಮನಾ ಸಾವನ್ನಪ್ಪಿದ್ದಾರೆ. ಆರೋಪಿ ಮಣಿಕಂದನ್ ತುಳಿದ ಪರಿಣಾಮ ಓಮನ ಬಹುತೇಕ ಮೂಳೆಗಳು ಮುರಿದು ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.ಘಟನೆ ಸಂಬಂಧ ತಿರುವನಂತಪುರದ ವಟ್ಟಪ್ಪರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ಆರೋಪಿ ಮಣಿಕಂದನ್‌ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *