ವಿನಯ್ ಅವರು, ಗಿಡ್ಡಯ್ಯ ಅವರೊಂದಿಗೆ ತಮ್ಮ ತೋಟದಲ್ಲಿ ಗೊಬ್ಬರ ಹಾಕುತ್ತಿದ್ದ ವೇಳೆ, ಎರಡು ಕರಡಿಗಳು ಏಕಕಾಲದಲ್ಲಿ ದಾಳಿ ನಡೆಸಿವೆ. ದಾಳಿಯಿಂದ ಇಬ್ಬರಿಗೂ ತಲೆ, ಬೆನ್ನು ಮತ್ತು ಕೈಕಾಲುಗಳಲ್ಲಿ ಗಂಭೀರ ಗಾಯಗಳಾಗಿವೆ.ಇವರಿಬ್ಬರ ಕಿರುಚಾಟ ಕೇಳಿ ಅಕ್ಕಪಕ್ಕದ ತೋಟದವರು ಬಂದು ಕಿರುಚಾಡಿದ ಬಳಿಕ ಕರಡಿಗಳು ಕಾಫಿ ತೋಟದೊಳಗೆ ಕಣ್ಮರೆಯಾಗಿವೆ. ಮಳೆಯಾಗುತ್ತಿದ್ದರಿಂದ ಮಂಜು ಮುಸುಕಿದ ವಾತಾವರಣವಿದ್ದು, ಕರಡಿಗಳು ಸಮೀಪಕ್ಕೆ ಬರುವವರೆಗೂ ಕಾಣಿಸಿಕೊಳ್ಳದೆ ಇದ್ದುದರಿಂದ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಗಾಯಗೊಂಡಿದ್ದ ಇಬ್ಬರನ್ನೂ ತಕ್ಷಣವೇ ಎಂಜಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

