ಅಂಬೇಡ್ಕರ್ ವೃತ್ತದ ಮುಂದಿರುವ ವಕ್ಫ್ ಮಂಡಳಿಗೆ ಸಂಬಂಧಿಸಿದ ಹಾಶ್ಮಿಯ ಕಾಂಪೌಂಡ್ ಜಮೀನು ಅತಿಕ್ರಮಣದ ಬಗ್ಗೆ ಕಲಬುರಗಿಯ ನ್ಯಾಯ ಮಂಡಳಿಯಲ್ಲಿ ವಾದ-ವಿವಾದ ನಡೆದು ಕೊನೆಗೆ ನ್ಯಾಯಾಲಯವು ಜಿಲ್ಲಾ ವಕ್ಫ್ ಮಂಡಳಿ ಪರವಾಗಿ ತೀರ್ಪು ನೀಡಿದೆ.ಅತಿಕ್ರಮಣ ತೆರವಿನ ಬಗ್ಗೆ ಮಾಹಿತಿ ತಿಳಿದ ಸ್ಥಳೀಯ ನಿವಾಸಿಗಳು ಕುಟುಂಬ ಸಮೇತ ಹಾಶ್ಮಿಯ ಕಾಂಪೌಂಡ್ ಮುಖ್ಯದ್ವಾರದ ಬಳಿ ಪ್ರತಿಭಟನಾ ಧರಣಿ ಆರಂಭಿಸಿ ತೆರವಿಗೆ ವಿರೋಧ ವ್ಯಕ್ತಪಡಿಸಿ ಘೋಷಣೆ ಕೂಗಾಲಾರಂಭಿಸಿದರು.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರು ಮತ್ತು ಅಧಿಕಾರಿಗಳು ಹಾಶ್ಮಿಯ ಕಂಪೌಂಡ್ ಸ್ಥಳಕ್ಕೆ ಭೇಟಿ ನೀಡಿ ಈ ಜಾಗದಲ್ಲಿ ಅತಿಕ್ರಮಿಸಿ ಮನೆ , ಮತ್ತು ಅಂಗಡಿ, ಮಳಿಗೆಗಳನ್ನು ನಿರ್ಮಾಣ ಮಾಡಿಕೊಂಡವರ ಮೂರು ದಿನದೊಳಗೆ ಖಾಲಿ ಮಾಡಬೇಕು ಸೂಚನೆ ನೀಡಿದ್ದರು. ಒಂದು ವೇಳೆ ಖಾಲಿ ಮಾಡದಿದ್ದರೆ ಜಿಲ್ಲಾಡಳಿತ ದಿಂದ ಮನೆ, ಅಂಗಡಿ ,ಮಳಿಗೆಗಳನ್ನು ತೆರವುಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದರು.ಅದರಂತೆ ಇಂದು ಭಾರೀ ಪೊಲೀಸ್ ಬಂದೋಬಸ್ತ್ ನೊಂದಿಗೆ ತೆರವು ಕಾರ್ಯಾಚರಣೆ ನಡೆಯುತ್ತಿದೆ.ಸ್ಥಳಕ್ಕೆ ಸಹಾಯಕ ಆಯುಕ್ತರು, ತಹಶೀಲ್ದಾರ್ ಶರ್ಮ, ಡಿವೈಎಸ್ಪಿ, ಮಹಾನಗರ ಪಾಲಿಕೆ ಉಪಾಯುಕ್ತ ಗುರುಸಿದ್ದಯ್ಯ ಹಿರೇಮಠ, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಮೌಲಾನಾ ಫರೀದ್ ಖಾನ್, ಅಧಿಕಾರಿ ಸಲೀಂ ಪಾಷಾ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

