ರಾಜಧಾನಿ ಬೆಂಗಳೂರಿನಲ್ಲಿ ವರ್ಣಾರ್ಭಟದಿಂದ ಸಂಪೂರ್ಣ ಜನಜೀವನವೇ ಅಸ್ತವ್ಯಸ್ತವಾಗಿದೆ. ಹಾಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಚಿವರು ಶಾಸಕರು ಸೇರಿದಂತೆ ಅಧಿಕಾರಿಗಳು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇನ್ಮುಂದೆ ಬೇಸ್ಮೆಂಟ್ ನಿರ್ಮಿಸುವುದಕ್ಕೆ ಅವಕಾಶ ನೀಡಬಾರದು. ತಗ್ಗು ಪ್ರದೇಶದಲ್ಲಿ ಬೇಸ್ಮೆಂಟ್ ನಿರ್ಮಿಸಲು ಅವಕಾಶ ನೀಡಬಾರದು. 166 ಸೂಕ್ಷ್ಮ ಅತಿ ಸೂಕ್ಷ್ಮ ಪ್ರದೇಶಗಳು ಅಂತ ಗುರುತಿಸಲಾಗಿದೆ. ಎಷ್ಟೇ ಪ್ರಭಾವಿಗಳಿದ್ದರೂ ರಾಜಕಾಲುವೇ ಒತ್ತುವರಿತರೆಗೆ ಸೂಚಿಸಿದ್ದೇನೆ. ಕೋರ್ಟ್ ನಿಂದ ತಡೆಯಾಜ್ಞೆ ತಂದ ಕಡೆ ಮಾತ್ರ ವಿಳಂಬ ಮಾಡಲಾಗಿದೆ ಎಂದರು.ಪಣತ್ತೂರು ಗಾರ್ಡನ್ನಲ್ಲೂ ಮಳೆ ನೀರು ಸರಿಯಾಗಿ ಹರಿಯುತ್ತಿಲ್ಲ. ಪಣತ್ತೂರು ಗಾರ್ಡನ್ನಲ್ಲಿ ರಸ್ತೆ ಅಗಲೀಕರಣ ಮಾಡಬೇಕಿದೆ. ಹೊಸ ತಂತ್ರಜ್ಞಾನ ಬಳಸಿ ನೀರು ಹರಿಯುವಂತೆ ಕ್ರಮ ಕೈಗೊಳ್ಳಲಾಗಿದೆ.ಸಾಯಿ ಲೇಔಟ್ ನಲ್ಲಿ ನೀರು ಸರಾಗವಾಗಿ ಹರಿದರೆ ಮನೆಗೆ ನೀರು ನುಗ್ಗುವುದಿಲ್ಲ. ಮಳೆಯಿಂದ ಹಾನಿಯಾದ ಪ್ರದೇಶಗಳಲ್ಲಿ ಇಂದು ಪರಿಶೀಲಿಸಿದ್ದೇವೆ. ನಾನು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಚಿವರು ಶಾಸಕರು ಹಾಗೂ ಅಧಿಕಾರಿಗಳು ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

