ಪಾದಚಾರಿಗೆ ಪಿಕ್‌ಆಪ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಬ್ಬಕ್ಕ ಸರ್ಕಲ್ ಬಳಿ ಬುಧವಾರ ರಾತ್ರಿ ನಡೆದಿದೆ.ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ.ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸ್ ಸಂಚಾರಿ ವಿಭಾಗದ ಡಿಸಿಪಿ ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

