ದೊಡ್ಡಿಂದುವಾಡಿ ಗ್ರಾಮದ ಹೊರವಲಯದ ಗುಂಡಾಲ್ ಜಲಾಶಯದ ವ್ಯಾಪ್ತಿಯ ಜಮೀನುಗಳಲ್ಲಿ ಕಾಡು ಹಂದಿಗಳು ದಾಳಿ ಮಾಡಿ ಬೆಳೆಗಳನ್ನು ನಾಶ ಮಾಡಿದ್ದು, ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಬಿಆರ್‌ಟಿ ವಲಯ ಅರಣ್ಯ ಅಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.ಮೊದಲೇ ರೈತರು ಸಾಲ ಮಾಡಿ ಬೆಳೆ ಬೆಳೆದಿದ್ದೇವೆ. ಕಾಡು ಪ್ರಾಣಿಗಳ ಕಾಟ ಮಿತಿಮೀರಿದ್ದು, ರೈತರು ಜೀವನ ನಡೆಸುವುದೇ ಕಷ್ಟವಾಗಿದೆ. ಆದ್ದರಿಂದ ಕೂಡಲೇ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕು. ಕಾಡುಪ್ರಾಣಿ ಹಾವಳಿಯನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಮಾದೇಶ್, ಕಾರ್ಯದರ್ಶಿ ವೆಂಕಟೇಶ್. ಆರ್, ಸದಸ್ಯ ಬಲನಿಂಗಶೆಟ್ಟಿ, ಶ್ರೀನಿವಾಸ್, ಮಾದೇಶ್, ರಾಚಪ್ಪ, ದಿಲೀಪ್ ಕುಮಾರ್ ಇತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

