Breaking News

ಕುಂದಾಪುರ : ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜಪ್ಪ ಎನ್. ನಿಧನ!

ಮೂಲತಃ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾದ ನಂಜಪ್ಪ ಅವರು ಕಳೆದ ಅಗಸ್ಟ್ ತಿಂಗಳಿನಿಂದ ಕುಂದಾಪುರ ಪೊಲೀಸ್ ಠಾಣೆಯಲ್ಲಿ‌ ಪೊಲೀಸ್ ನಿರೀಕ್ಷಕಾರಾಗಿ ಸೇವೆ ಸಲ್ಲಿಸುತ್ತಿದ್ದರು.ಸೋಮವಾರದಂದು ಕರ್ತವ್ಯದಲ್ಲಿರುವಾಗಲೇ ರಕ್ತದೊತ್ತಡದಿಂದ ಬಳಲುತ್ತಿದ್ದ ನಂಜಪ್ಪ ಅವರು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎರಡು ದಿನಗಳ ಕಾಲ ಚಿಕಿತ್ಸೆ‌ಪಡೆದರೂ‌ಅವರ ಆರೋಗ್ಯದಲ್ಲಿ ಯಾವುದೇ ಗಣನೀಯ ಚೇತರಿಕೆ ಕಂಡುಬಂದಿರಲಿಲ್ಲ. ಬುಧವಾರ ರಾತ್ರಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.ಆಗಸ್ಟ್‌ನಲ್ಲಿ ಕುಂದಾಪುರ ಠಾಣೆ ಪೊಲೀಸ್ ನಿರೀಕ್ಷಕರಾಗಿ‌ ನಿಯುಕ್ತಿಗೊಂಡಿದ್ದರು.

ಇನ್ಸ್‌ಪೆಕ್ಟರ್ ನಿಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *