Breaking News

ಧಾರವಾಡ : ಕಾರು ಡಿಕ್ಕಿಯಾಗಿ ಬ್ಯಾಂಕ್‌ ಮ್ಯಾನೇಜರ್‌ ಸಾವು, ಪತ್ನಿ-ಮಗಳು ಗಂಭೀರ

ವಾಹನವೊಂದಕ್ಕೆ ಹಿಂದೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಓಡಿಸುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಬಳಿ ನಡೆದಿದೆ. ಮೂಲತಃ ಮದ್ಯಪ್ರದೇಶ ಮೂಲದ ರಾಹುಲ್ ಶುಕ್ಲಾ, ಧಾರವಾಡದಿಂದ ಬೆಳಗಾವಿಗೆ ಕುಟುಂಬ ಸಮೇತ ಹೊರಟಿದ್ದರು.ರಾಹುಲ್ ಶುಕ್ಲಾ (40)ಸಾವನ್ನಪ್ಪಿದ್ದರೆ, ಪತ್ನಿ ಶ್ರೇಯಾ ಶುಕ್ಲಾ(35), ಮಗಳು ಕಿಯಾನಾ ಶುಕ್ಲಾ(3) ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *