ವಿಟ್ಲ ಸಮೀಪದ ಕನ್ಯಾನದಲ್ಲಿ ತನ್ನ ಪತ್ನಿಯ ಸೀಮಂತ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬರು ಮನೆಯಲ್ಲಿ ಕುಸಿದು ಬಿದ್ದು ಶುಕ್ರವಾರ ಮೃತಪಟ್ಟಿದ್ದಾರೆ.ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಯಿತು. ಅಷ್ಡರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಸೀಮಂತದ ಸಂಭ್ರಮದಲ್ಲಿದ್ದ ಮನೆಯಲ್ಲಿ ಈಗ ಆಕ್ರಂದನ ಮುಗಿಲು ಮುಟ್ಟಿದೆ. ಸಾವಿಗೆ ವೈದ್ಯಕೀಯ ಕಾರಣ ತಿಳಿದು ಬಂದಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

